Home ಟಾಪ್ ಸುದ್ದಿಗಳು ಚಂಡೀಗಢದಲ್ಲಿ ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ: ಜಲಫಿರಂಗಿ ಪ್ರಯೋಗ

ಚಂಡೀಗಢದಲ್ಲಿ ಬೆಲೆ ಏರಿಕೆ ವಿರುದ್ಧ ಯುವ ಕಾಂಗ್ರೆಸ್ ಪ್ರತಿಭಟನೆ: ಜಲಫಿರಂಗಿ ಪ್ರಯೋಗ

ನವದೆಹಲಿ: ಸರಕುಗಳ ಬೆಲೆ ಏರಿಕೆಯ ವಿರುದ್ಧ ಕಾಂಗ್ರೆಸ್ ರಾಷ್ಟ್ರವ್ಯಾಪಿ ಪ್ರತಿಭಟನೆಗಳನ್ನು ನಡೆಸುತ್ತಿರುವ ಬೆನ್ನಲ್ಲೇ  ಚಂಡೀಗಢದ ಯುವ ಕಾಂಗ್ರೆಸ್ ಸದಸ್ಯರು ಸೋಮವಾರ ಹಣದುಬ್ಬರದ ವಿಷಯದ ವಿರುದ್ಧ ನಗರದ ಬೀದಿಗಳಲ್ಲಿ ಪ್ರತಿಭಟನೆ ನಡೆಸಿದರು.

ಪ್ರತಿಭಟನಕಾರರು ಬೆಲೆ ಏರಿಕೆಗೆ ಸಂಬಂಧಿಸಿದಂತೆ ಭಿತ್ತಿಪತ್ರಗಳು ಮತ್ತು ಗ್ಯಾಸ್ ಸಿಲಿಂಡರ್ ಗಳನ್ನು ಹಿಡಿದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.

ಸಂಸದ ಕಿರಣ್ ಖೇರ್ ಅವರ ಮನೆಗೆ ಪ್ರತಿಭಟನಕಾರರು ಮುತ್ತಿಗೆ ಹಾಕಲು ಪ್ರಯತ್ನಿಸುತ್ತಿದ್ದಂತೇ ಕಾಂಗ್ರೆಸ್ ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಜಲಫಿರಂಗಿಗಳನ್ನು ಬಳಸಿದರು. ಮತ್ತೊಂದೆಡೆ, ಪ್ರತಿಭಟನಕಾರರು ಬ್ಯಾರಿಕೇಡ್ ಗಳನ್ನು ಮುರಿದು ಪ್ರತಿಭಟನೆಯನ್ನು ಮುಂದುವರಿಸಲು ಪಟ್ಟು ಹಿಡಿದರು.

Join Whatsapp
Exit mobile version