ಪವಿತ್ರ ಕಅಬಾದಲ್ಲಿ ಭಾರತ್ ಜೋಡೋ ಯಾತ್ರೆಯ ಫಲಕ ಪ್ರದರ್ಶನ: ಯೂತ್ ಕಾಂಗ್ರೆಸ್ ಕಾರ್ಯಕರ್ತನ ಬಂಧನ

Prasthutha|

ಜಿದ್ದಾ: ಯುವ ಕಾಂಗ್ರೆಸ್ ಕಾರ್ಯಕರ್ತನೋರ್ವ ಸೌದಿ ಅರೇಬಿಯಾದ ಪವಿತ್ರ ಕಅಬಾದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರ ಭಾರತ್ ಜೋಡೋ ಯಾತ್ರೆಯನ್ನು ಬೆಂಬಲಿಸುವ ಫಲಕವನ್ನು ಹಿಡಿದಿದ್ದಕ್ಕಾಗಿ ಆತನನ್ನು ಅಲ್ಲಿನ ಪೊಲೀಸರು ವಶಕ್ಕೆ ಪಡೆದಿದ್ದಾರೆ.

- Advertisement -


ಮಧ್ಯಪ್ರದೇಶದ ಝಾನ್ಸಿ ಬಳಿಯ ನಿವಾರಿ ಜಿಲ್ಲೆಯ ನಿವಾಸಿ ರಝಾ ಖಾದ್ರಿ (26) ಅವರನ್ನು ಮಕ್ಕಾದಲ್ಲಿನ ಪವಿತ್ರ ಕಾಬಾದಲ್ಲಿ ಫಲಕವನ್ನು ಪ್ರದರ್ಶಿಸಿದ್ದಕ್ಕಾಗಿ ಬಂಧಿಸಲಾಗಿದೆ.


ಭಾರತ್ ಜೋಡೋ ಯಾತ್ರೆಯನ್ನು ಬೆಂಬಲಿಸುವ ಫಲಕವನ್ನು ಹಿಡಿದಿರುವ ಛಾಯಾಚಿತ್ರವನ್ನೂ ಅವರು ತೆಗೆದುಕೊಂಡಿದ್ದರು. ಎರಡು ದಿನಗಳ ನಂತರ, ಮಧ್ಯಪ್ರದೇಶದ ಇತರ ಯಾತ್ರಾರ್ಥಿಗಳೊಂದಿಗೆ ತಂಗಿದ್ದ ಹೋಟೆಲ್ ನಲ್ಲಿ ಅವರನ್ನು ಸೌದಿ ಪೊಲೀಸರು ಪತ್ತೆಹಚ್ಚಿ ವಶಕ್ಕೆ ಪಡೆದಿದ್ದಾರೆ ಎಂದು ಮೂಲಗಳು ತಿಳಿಸಿವೆ.

- Advertisement -


ಇಸ್ಲಾಮಿಕ್ ಪವಿತ್ರ ಸ್ಥಳಗಳು ಸೇರಿದಂತೆ ಸೌದಿ ಅರೇಬಿಯಾದಲ್ಲಿ ಯಾವುದೇ ರೀತಿಯ ಧ್ವಜ ಮತ್ತು ಫಲಕವನ್ನು ಪ್ರದರ್ಶಿಸುವುದು ಕಾನೂನುಬಾಹಿರವಾಗಿದೆ.

Join Whatsapp