Home ಟಾಪ್ ಸುದ್ದಿಗಳು ಲಖಿಂಪುರ ಹಿಂಸಾಚಾರ ವಿರೋಧಿಸಿ ಗೃಹಸಚಿವ ಅಮಿತ್ ಶಾ ನಿವಾಸಕ್ಕೆ ಯುವ ಕಾಂಗ್ರೆಸ್ ಮುತ್ತಿಗೆ

ಲಖಿಂಪುರ ಹಿಂಸಾಚಾರ ವಿರೋಧಿಸಿ ಗೃಹಸಚಿವ ಅಮಿತ್ ಶಾ ನಿವಾಸಕ್ಕೆ ಯುವ ಕಾಂಗ್ರೆಸ್ ಮುತ್ತಿಗೆ

ಲಕ್ನೋ: ಉತ್ತರಪ್ರದೇಶದ ಲಖಿಂಪುರ ಹಿಂಸಾಚಾರವನ್ನು ವಿರೋಧಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಇಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ನಿವಾಸಕ್ಕೆ ಮುತ್ತಿಗೆ ಹಾಕಿದ್ದರು.

ಲಖಿಂಪುರ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಅಜಯ್ ಮಿಶ್ರಾ ಅವರನ್ನು ಸಂಪುಟದಿಂದ ವಜಾಗೊಳಿಸಬೇಕೆಂದು ಒತ್ತಾಯಿಸಿ ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಶ್ರೀನಿವಾಸ್ ನೇತೃತ್ವದಲ್ಲಿ ಅಮಿತ್ ಶಾ ನಿವಾಸಕ್ಕೆ ನುಗ್ಗಲೆತ್ನಿಸಿದಾಗ ಪೊಲೀಸರು ಮತ್ತು ಯುವ ಕಾಂಗ್ರೆಸ್ ನಡುವೆ ಘರ್ಷಣೆ ನಡೆದಿದೆ.

ಕಳೆದ ವಾರ ಲಖಿಂಪುರ ಖೇರಿ ಘಟನೆಯಲ್ಲಿ ರೈತರು ನಡೆಸುತ್ತಿದ್ದ ಪ್ರತಿಭಟನೆ ಕಾರು ಹರಿಸಿ ನಾಲ್ವರು ರೈತರು ಸೇರಿದಂತೆ ಎಂಟು ಮಂದಿಯನ್ನು ಕೊಲೆಗೈಯ್ಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸಚಿವ ಅಜಯ್ ಮಿಶ್ರಾ ಅವರ ಪುತ್ರ ಆಶಿಶ್ ಮಿಶ್ರಾ ಅವರನ್ನು ಸಿ.ಸಿ.ಬಿ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Join Whatsapp
Exit mobile version