Home ಟಾಪ್ ಸುದ್ದಿಗಳು ಉತ್ತರಪ್ರದೇಶ ಮುಖ್ಯಮಂತ್ರಿ ನಿವಾಸದ ಎದುರು ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಉತ್ತರಪ್ರದೇಶ ಮುಖ್ಯಮಂತ್ರಿ ನಿವಾಸದ ಎದುರು ಯುವಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನ

ಲಕ್ನೋ: ಉತ್ತರಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಅವರ ನಿವಾಸದ ಹೊರಗೆ ಯುವಕನೋರ್ವ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.

ಮೈನ್ಪುರಿ ಜಿಲ್ಲೆಯ ವಿಮಲೇಶ್ ಕುಮಾರ್ ಎಂಬ ಯುವಕ ವಿಷ ಸೇವಿಸಿದ್ದು, ತಕ್ಷಣ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಸ್ತುತ ಆತನ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.

ಮುಖ್ಯಮಂತ್ರಿಯ ಜನತಾ ದರ್ಬಾರ್ ಗೆ ಆಗಮಿಸಿದ ಯುವಕನನ್ನು ಅಲ್ಲಿಗೆ ಪ್ರವೇಶಿಸಲು ಅನುಮತಿ ನೀಡಿರಲಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಈ ಮಧ್ಯೆ ಯುವಕನ ಭೂಮಿಯನ್ನು ಸಮಾಜವಾದಿ ಮುಖಂಡರು ಮೈನ್ಪುರಿಯಲ್ಲಿ ಕಬಳಿಸಿದ್ದಾರೆ. ಮಾತ್ರವಲ್ಲ ಈ ಸಂಬಂಧ ಅಧಿಕಾರಿಗಳಿಗೆ ದೂರು ನೀಡಿದರೂ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಹೇಳಲಾಗುತ್ತಿದೆ.


ಇದಕ್ಕೂ ಮುನ್ನ ಅವರು ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಆತನ ಸಮಸ್ಯೆಯನ್ನು ತಿಳಿಸಲು ಎರಡು ಸಲ ಪ್ರಯತ್ನ ಪಟ್ಟರು ಕೂಡ ಮುಖ್ಯಮಂತ್ರಿಯ ಭೇಟಿಗೆ ಅವಕಾಶ ನೀಡಿರಲಿಲ್ಲ ಎಂದು ಹೇಳಲಾಗುತ್ತಿದೆ.

Join Whatsapp
Exit mobile version