ಕಡಬ | ವಿದ್ಯುತ್ ಶಾಕ್ ತಗುಲಿ ಯುವಕ ಮೃತ್ಯು

Prasthutha|

ಕಡಬ : ವಿದ್ಯುತ್ ಶಾಕ್ ತಗುಲಿ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ಕಡಬದ ವಿಮಲಗಿರಿ ಎಂಬಲ್ಲಿ ನಡೆದಿದೆ.

- Advertisement -

ಮೃತ ಯುವಕನನ್ನು ಬಡಬೆಟ್ಟು ನಿವಾಸಿ ತಂಗಚ್ಚನ್ ಎಂಬವರ ಪುತ್ರ ಲಿಜೋ (35) ಎಂದು ಗುರುತಿಸಲಾಗಿದೆ. ಮನೆಯ ಮುಂಭಾಗದಲ್ಲಿ ಕಬ್ಬಿಣದ ಸಲಾಕೆಯಿಂದ ತೆಂಗಿನಕಾಯಿ ತೆಗೆಯುತ್ತಿದ್ದ ವೇಳೆ ಸಲಾಕೆಯು ವಿದ್ಯುತ್ ತಂತಿಗೆ ಸ್ಪರ್ಶಿಸಿ ಅವಘಡ ಸಂಭವಿಸಿದ್ದು, ಲಿಜೋ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎನ್ನಲಾಗಿದೆ. ಕಡಬ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.

Join Whatsapp