Home ಟಾಪ್ ಸುದ್ದಿಗಳು ಸುಳ್ಯದಲ್ಲಿ ಲಾರಿಯಡಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಯುವಕ ಆಸ್ಪತ್ರೆಯಲ್ಲಿ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸುಳ್ಯದಲ್ಲಿ ಲಾರಿಯಡಿಗೆ ಹಾರಿ ಆತ್ಮಹತ್ಯೆ ಯತ್ನಿಸಿದ ಯುವಕ ಆಸ್ಪತ್ರೆಯಲ್ಲಿ ಸಾವು: ಸಿಸಿಟಿವಿಯಲ್ಲಿ ದೃಶ್ಯ ಸೆರೆ

ಸುಳ್ಯ: ಮುಖ್ಯ ರಸ್ತೆಯಲ್ಲಿ ಚಲಿಸುತ್ತಿರುವ ಲಾರಿಯಡಿಗೆ ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದ ಸುಳ್ಯದ ಯುವಕ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.

ಸುಳ್ಯದ ಗಾಂಧಿನಗರ ಬಳಿ ನಿನ್ನೆ ಲಾರಿಯಡಿಗೆ ಹಾರಿದ ತಕ್ಷಣವೇ ಲಾರಿ ಚಾಲಕ ಈತನನ್ನು ಗಮನಿಸಿದ್ದು ತಕ್ಷಣವೇ ಬ್ರೇಕ್ ಹಾಕಿ ಗಾಡಿ ನಿಲ್ಲಿಸಿದ್ದಾನೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡ ವ್ಯಕ್ತಿಯನ್ನು ಸುಳ್ಯದ ಆಸ್ಪತ್ರೆಗೆ ದಾಖಲಿಸಿ, ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿಗೆ ಕಳುಹಿಸಲಾಗಿದೆ ಎಂದು ತಿಳಿದು ಬಂದಿದೆ.

ಪ್ರಾಥಮಿಕ ಮಾಹಿತಿ ಪ್ರಕಾರ ಗಾಯಾಳುವನ್ನು ಸುಳ್ಯದ ಗಾಂಧಿನಗರದಲ್ಲಿ ವಾಸವಿರುವ ಉತ್ತರ ಕರ್ನಾಟಕದ ಹಾವೇರಿ ಮೂಲದ ಮಂಜುನಾಥ್ ಎಂದು ಗುರುತಿಸಲಾಗಿದೆ. ಸುಳ್ಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Join Whatsapp
Exit mobile version