Home ಟಾಪ್ ಸುದ್ದಿಗಳು ತಲೆಗೆ ಕಲ್ಲು ಹಾಕಿ ಯುವಕನ ಹತ್ಯೆ

ತಲೆಗೆ ಕಲ್ಲು ಹಾಕಿ ಯುವಕನ ಹತ್ಯೆ

ರಾಮನಗರ: ವ್ಯಕ್ತಿಯೊಬ್ಬರ ತಲೆಗೆ ಕಲ್ಲು ಹಾಕಿ ಹತ್ಯೆ ಮಾಡಲಾದ ಘಟನೆ ಕನಕಪುರ ತಾಲೂಕಿನ ಸಾತನೂರು ಹೋಬಳಿಯ ಹಲಸಿನಮರದದೊಡ್ಡಿ ಗ್ರಾಮದಲ್ಲಿ ನಡೆದಿದೆ.


ಹತ್ಯೆಗೊಳಗಾದ ವ್ಯಕ್ತಿಯನ್ನು ಮೂರ್ತಿ (30) ಎಂದು ಗುರುತಿಸಲಾಗಿದೆ. ಗ್ರಾಮದಲ್ಲಿ ನಡೆದಿರುವ ನರೇಗಾ ಕಾಮಗಾರಿಗಳ ವಿವರಗಳನ್ನು ಮಾಹಿತಿ ಹಕ್ಕು ಕಾಯ್ದೆ ಅಡಿ ಪಡೆದುಕೊಂಡಿದ್ದ ಮೂರ್ತಿ, ಕಾಮಗಾರಿಗಳಲ್ಲಿ ಅಕ್ರಮ ನಡೆದಿರುವ ಕುರಿತು ನರೇಗಾ ಓಂಬುಡ್ಸ್ ಮನ್‌ಗೆ ದೂರು ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಹತ್ಯೆ ನಡೆದಿದೆ. ಇದಕ್ಕೂ ಮೊದಲು ತಂಡ ಕಟ್ಟಿಕೊಂಡು ಮೂರ್ತಿ ಮೇಲೆ 2–3 ಬಾರಿ ಹಲ್ಲೆ ನಡೆಸಿದ್ದರು ಎಂದು ಕುಟುಂಬದವರು ಆರೋಪಿಸಿದ್ದಾರೆ.


ಈ ಮಧ್ಯೆ ತಾನೇ ಹತ್ಯೆ ಮಾಡಿರುವುದಾಗಿ ಮೂರ್ತಿ ಸಂಬಂಧಿಕ ಚೇತನ್‌ ಎಂಬಾತ ಪೊಲೀಸರ ಮುಂದೆ ಶರಣಾಗಿದ್ದಾನೆ. ಆದರೆ, ಕುಟುಂಬ ಇದನ್ನು ನಿರಾಕರಿಸಿದ್ದು, 8–10 ಮಂದಿ ಗುಂಪು ಸೇರಿಕೊಂಡು ಈ ಹತ್ಯೆ ನಡೆಸಿದ್ದಾರೆ. ಆರೋಪಿಗಳನ್ನು ಬಂಧಿಸುವವರೆಗೂ ಶವ ತೆಗೆಯುವುದಿಲ್ಲ ಎಂದು ಕುಟುಂಬದವರು ಪಟ್ಟು ಹಿಡಿದಿದ್ದರು.


ಪೊಲೀಸರು ನ್ಯಾಯಸಮ್ಮತ ತನಿಖೆ ನಡೆಸುವ ಭರವಸೆ ನೀಡಿದ ಬಳಿಕ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಿದ್ದು, ನಂತರ ಅಂತ್ಯಕ್ರಿಯೆ ನಡೆಸಲಾಯಿತು.

Join Whatsapp
Exit mobile version