July 24, 2021

ಯುವಕ ಲಾಕಪ್ ಡೆತ್| ಠಾಣೆಗೆ ನುಗ್ಗಿದ ಉದ್ರಿಕ್ತರಿಂದ ಮಹಿಳಾ ಪೇದೆಯ ಹತ್ಯೆ!

ಬಿಹಾರ:  ಬಿಹಾರದಲ್ಲಿ ಲಾಕಪ್ ಡೆತ್ ಖಂಡಿಸಿ ನಡೆಯುತ್ತಿರುವ ಪ್ರತಿಭಟನೆ ಹಿಂಸೆಗೆ ತಿರುಗಿದ್ದು, ಉದ್ರಿಕ್ತ ಜನರು ಮಹಿಳಾ ಪೇದೆಯನ್ನು ಹತ್ಯೆಗೈದಿದ್ದಾರೆ.

ಜೆಹಾನಾಬಾದ್ ನಲ್ಲಿ ಮದ್ಯ ವ್ಯಾಪಾರದಲ್ಲಿ ತೊಡಗಿದ್ದಾನೆಂದು ಆರೋಪಿಸಿ ಗೋವಿಂದ್ ಮಾಂಝಿ ಎಂಬಾತನನನ್ನು ಪೊಲೀಸರು ಬಂಧಿಸಿದ್ದರು. ನ್ಯಾಯಾಂಗ ಬಂಧನದಲ್ಲಿದ್ದ ಈತ ಔರಂಗಾಬಾದ್ ಜಿಲ್ಲೆಯ ಜೈಲಿನಲ್ಲಿ ಸಾವನ್ನಪ್ಪಿದ್ದಾನೆ. ಪೊಲೀಸರು ಗೋವಿಂದಗೆ ದೈಹಿಕ ಚಿತ್ರಹಿಂಸೆ ನೀಡಿದ್ದರಿಂದ ಸಾವನ್ನಪ್ಪಿದ್ದಾನೆ ಎಂದು ಆರೋಪಿಸಿ ಗ್ರಾಮಸ್ಥರು ಪೊಲೀಸ್ ಠಾಣೆಗೆ ನುಗ್ಗಲು ಯತ್ನಿಸಿದರು. ಈ ವೇಳೆ ಪೊಲೀಸರು ಅವರನ್ನು ತಡೆದಿದ್ದಾರೆ.

 ಇದರಿಂದ ಕೋಪಗೊಂಡ ಉದ್ರಿಕ್ತರು ಕಲ್ಲು ತೂರಾಟ ನಡೆಸಿದ್ದಾರೆ. ಉದ್ರಿಕ್ತರನ್ನು ಚದುರಿಸಲು ಯತ್ನಿಸುತ್ತಿದ್ದ ಸಂದರ್ಭದಲ್ಲಿ ಪೊಲೀಸ್ ಪೇದೆ ಕಾಂತಿ ದೇವಿ ಅವರಿಗೆ ವಾಹನ ಡಿಕ್ಕಿ ಹೊಡೆದು ಹತ್ಯೆ ಮಾಡಲಾಗಿದೆ ಎಂದು ಹೇಳಲಾಗಿದೆ.

ಪ್ರಕರಣ ಸಂಬಂಧ ಐದು ಜನರನ್ನು ಬಂಧಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸ್ ವಿಶೇಷ ಪಡೆಗಳನ್ನು ನೇಮಿಸಲಾಗಿದೆ.

ನಿಮ್ಮ ಚಂದಾ ಹಣ ಪಾವತಿಸಲು ಈ ಕೆಳಗಿನ ಬಟನ್ ಮೇಲೆ ಕ್ಲಿಕ್ ಮಾಡಿ.

ಜನಪರ ಪತ್ರಿಕೋದ್ಯಮವನ್ನು ಬೆಂಬಲಿಸಿ
ಪ್ರಸ್ತುತದ ಬೆಳವಣಿಗೆಯಲ್ಲಿ ಪಾಲುದಾರರಾಗಿ
ಜನಸಾಮಾನ್ಯರ ಜ್ವಲಂತ ಸಮಸ್ಯೆಗಳಿಗೆ ಸದಾ ಮಿಡಿಯುತ್ತಾ, ಧ್ವನಿ ಇಲ್ಲದ ಸಮುದಾಯಗಳ ಧ್ವನಿಯಾಗುತ್ತಾ ಮಾಧ್ಯಮ ಲೋಕದಲ್ಲಿ ಸ್ವತಂತ್ರವಾಗಿ ಕಾರ್ಯಾಚರಿಸುತ್ತಿರುವ ಪ್ರಸ್ತುತಕ್ಕೆ ನಿಮ್ಮ ಪ್ರೋತ್ಸಾಹ, ಬೆಂಬಲ ಯಾವತ್ತೂ ಇರಲಿ. ಪ್ರಸ್ತುತಕ್ಕೆ ದೇಣಿಗೆ ನೀಡಲು ಬಯಸುವವರು ಈ ಕೆಳಗಿನ ಲಿಂಕ್ ಮೇಲೆ ಕ್ಲಿಕ್ ಮಾಡಿ ಹಣವನ್ನು ಪಾವತಿಸಬಹುದು.

ಧನ್ಯವಾದಗಳು

ಟಾಪ್ ಸುದ್ದಿಗಳು

ವಿಶೇಷ ವರದಿ

error: Content is protected !!