Home ಟಾಪ್ ಸುದ್ದಿಗಳು ಶಿವಮೊಗ್ಗ: ಮನೆ ಮುಂದೆ ನಿಂತಿದ್ದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ಮನೆ ಮುಂದೆ ನಿಂತಿದ್ದ ಯುವಕನ ಬರ್ಬರ ಹತ್ಯೆ

ಶಿವಮೊಗ್ಗ: ಯುವಕನೊಬ್ಬನನ್ನು ಮನೆಯ ಮುಂದೆಯೇ ಮಾರಕಾಸ್ತ್ರಗಳಿಂದ ಹಲ್ಲೆಗೈದು ಹತ್ಯೆ ಮಾಡಿರುವ ಘಟನೆ ಭದ್ರಾವತಿಯ ಬೊಮ್ಮನಕಟ್ಟೆ ಬಡಾವಣೆಯಲ್ಲಿ ನಡೆದಿದೆ.

ಹತ್ಯೆಯಾದ ಯುವಕನನ್ನು ಮುಜಾಯಿದ್ದೀನ್ (32) ಎಂದು ಗುರುತಿಸಲಾಗಿದೆ. ರಾತ್ರಿ ವೇಳೆ ಮನೆಯಿಂದ ಹೊರಗಡೆ ಬಂದು ಗೇಟ್ ಬಳಿ ನಿಂತಿದ್ದ ವೇಳೆ ಏಕಾಏಕಿ ಮಾರಕಾಸ್ತ್ರಗಳಿಂದ ದುಷ್ಕರ್ಮಿಗಳು ದಾಳಿ ನಡೆಸಿದ್ದಾರೆ. ಈ ವೇಳೆ ತಲೆಗೆ ತೀವ್ರವಾಗಿ ಪೆಟ್ಟಾಗಿದ್ದು ಆತ ಸ್ಥಳದಲ್ಲೇ ಮೃತಪಟ್ಟಿದ್ದಾನೆ. ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ.

ಹತ್ಯೆಗೈದ ಆರೋಪಿಗಳು ತಲೆ ಮರೆಸಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಈ ಸಂಬಂಧ ಘಟನಾ ಸ್ಥಳಕ್ಕೆ ಪೇಪರ್ ಟೌನ್ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.

Join Whatsapp
Exit mobile version