Home ಕರಾವಳಿ ಬಂಟ್ವಾಳ | ಯುವಕ ನೇಣುಬಿಗಿದು ಆತ್ಮಹತ್ಯೆ

ಬಂಟ್ವಾಳ | ಯುವಕ ನೇಣುಬಿಗಿದು ಆತ್ಮಹತ್ಯೆ

ವಿಟ್ಲ: ಯುವಕನೋರ್ವ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ವಿಟ್ಲ ಕೊಡಾಜೆಯಲ್ಲಿ ಗುರುವಾರ ನಡೆದಿದೆ.

ಮುಹಮ್ಮದ್ ಅವರ ಪುತ್ರ ಅಬ್ಧುಲ್ ನಝೀರ್(19) ಆತ್ಮಹತ್ಯೆ ಮಾಡಿಕೊಂಡ ಯುವಕ‌ ಎಂದು ತಿಳಿದು ಬಂದಿದೆ.

ನಝೀರ್ ಇಂದು ಸಂಜೆ ಕೊಡಾಜೆಯ ಫ್ಲ್ಯಾಟ್ ನಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

ಉಪ್ಪಳದಲ್ಲಿ ಕೆಲಸದಲ್ಲಿದ್ದ ಯುವಕ ಎರಡು ದಿನಗಳ‌ ಹಿಂದೆಯಷ್ಟೇ ಊರಿಗೆ ಬಂದಿದ್ದ ಎನ್ನಲಾಗಿದೆ. ಗುರುವಾರ ಮನೆಯಲ್ಲಿ ತನ್ನ ಕೊಠಡಿಗೆ ಬೀಗ ಹಾಕಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ.

ಮಧ್ಯಾಹ್ನ ಊಟ ಮಾಡಿ ನಿದ್ದೆ ಮಾಡುತ್ತೇನೆ ಎಂದು ಹೇಳಿ ಕೊಠಡಿಗೆ ಹೋದವನು ಸಂಜೆ 4 ಗಂಟೆಯಾದರೂ ಹೊರಬಾರದಿದ್ದಾಗ ಮನೆಯವರು ಬಾಗಿಲು ಬಡಿದಿದ್ದಾರೆ. ಎಷ್ಟೇ ಹೊತ್ತಾದರೂ ಬಾಗಿಲು ತೆಗೆಯದಿದ್ದಾಗ ಕಿಟಕಿ ಮೂಲಕ ನೋಡಿದಾಗ ಫ್ಯಾನಿಗೆ ನೇಣು ಬಿಗಿದಿರುವುದು ಕಂಡು ಬಂದಿದೆ. ಆತ್ಮಹತ್ಯೆಗೆ ಕಾರಣ ತಿಳಿದುಬಂದಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಬಂಟ್ವಾಳ ಸರ್ಕಾರಿ ಆಸ್ಪತ್ರೆಗೆ ಮೃತದೇಹವನ್ನು ರವಾನಿಸಲಾಗಿದೆ.

Join Whatsapp
Exit mobile version