Home ಟಾಪ್ ಸುದ್ದಿಗಳು ಸೋನಿಯಾ ಗಾಂಧಿ –ರಾಹುಲ್ ಭೇಟಿಯಾದ ವೈ.ಎಸ್. ಶರ್ಮಿಳಾ: ರಾಜಕೀಯ ವಲಯದಲ್ಲಿ ಚರ್ಚೆ

ಸೋನಿಯಾ ಗಾಂಧಿ –ರಾಹುಲ್ ಭೇಟಿಯಾದ ವೈ.ಎಸ್. ಶರ್ಮಿಳಾ: ರಾಜಕೀಯ ವಲಯದಲ್ಲಿ ಚರ್ಚೆ

ನವದೆಹಲಿ: ವೈಎಸ್ ಆರ್ ತೆಲಂಗಾಣ ಪಕ್ಷದ ಸಂಸ್ಥಾಪಕಿ ವೈ.ಎಸ್. ಶರ್ಮಿಳಾ ಅವರು ಕಾಂಗ್ರೆಸ್ ನಾಯಕಿ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರನ್ನು ದೆಹಲಿ ನಿವಾಸದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.


ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ನಾನು ಇಂದು ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದೇನೆ. ಉಭಯ ನಾಯಕರೊಂದಿಗೆ ಸಕಾರಾತ್ಮಕ ಚರ್ಚೆ ನಡೆದಿದೆ’ ಎಂದು ಹೇಳಿದ್ದಾರೆ.


ಶರ್ಮಿಳಾ ಅವರು ತಮ್ಮ ಪಕ್ಷವನ್ನು ಕಾಂಗ್ರೆಸ್ ಜೊತೆ ವಿಲೀನಗೊಳಿಸಲು ಮತ್ತು ತೆಲಂಗಾಣದಲ್ಲಿ ರಾಜಕೀಯವಾಗಿ ನೆಲೆ ಕಂಡುಕೊಳ್ಳಲು ಉತ್ಸುಕರಾಗಿದ್ದಾರೆ. ಆದರೆ, ರಾಜ್ಯದ ಕಾಂಗ್ರೆಸ್ ಘಟಕವು ಅವರನ್ನು ಪಕ್ಷಕ್ಕೆ ಬರಮಾಡಿಕೊಳ್ಳಲು ಹಿಂದೇಟು ಹಾಕುತ್ತಿರುವ ಹಿನ್ನೆಲೆಯಲ್ಲಿ ಶರ್ಮಿಳಾ ನೇರವಾಗಿ ಕಾಂಗ್ರೆಸ್ ಹೈಕಮಾಂಡ್ ಭೇಟಿಯಾಗಿದ್ದಾರೆ ಎಂದು ಮೂಲಗಳು ತಿಳಿಸಿವೆ.

Join Whatsapp
Exit mobile version