ಹೈದರಾಬಾದ್: ಪೊಲೀಸ್ ಅಧಿಕಾರಿಯ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವೈಎಸ್ ಆರ್ ತೆಲಂಗಾಣ ಪಕ್ಷದ ಅಧ್ಯಕ್ಷೆ ವೈ.ಎಸ್. ಶರ್ಮಿಳಾ ಅವರನ್ನು ಸೋಮವಾರ ಹೈದರಾಬಾದ್ ಪೊಲೀಸರು ಬಂಧಿಸಿದ್ದಾರೆ.
ಅನುಮತಿ ಪಡೆಯದೇ ಪ್ರತಿಭಟನೆಯೊಂದರಲ್ಲಿ ಭಾಗವಹಿಸಲು ಶರ್ಮಿಳಾ ತೆರಳುತ್ತಿದ್ದಾಗ ಅವರನ್ನು ಪೊಲೀಸರು ತಡೆಯಲು ಯತ್ನಿಸಿದ್ದಾರೆ. ಆಗ ಪೊಲೀಸರ ಮೇಲೆ ಶರ್ಮಿಳಾ ಹಲ್ಲೆ ನಡೆಸುತ್ತಿರುವುದು ಕಂಡು ಬಂದಿದೆ. ಅವರು ಎಸ್ ಐಟಿ ಕಚೇರಿಗೆ ತೆರಳುತ್ತಿದ್ದಾರೆ ಎಂಬ ಮಾಹಿತಿ ಸಿಕ್ಕಾಗ, ಅವರು ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ. ಹಾಗಾಗಿ, ಅಧಿಕಾರಿಗಳು ಅವರ ನಿವಾಸಕ್ಕೆ ತೆರಳಿದ್ದರು’ ಎಂದು ಪೊಲೀಸ್ ಉಪ ಕಮಿಷನರ್ (ಪಶ್ಚಿಮ ವಲಯ) ಜೋಯಲ್ ಡೇವಿಸ್ ಅವರು ಸುದ್ದಿಗಾರರಿಗೆ ಮಾಹಿತಿ ನೀಡಿದ್ದಾರೆ.
‘ಅಧಿಕಾರಿಗಳು ಶರ್ಮಿಳಾ ಅವರಿಗೆ ಮಾಹಿತಿ ನೀಡಲು ಮತ್ತು ತಮ್ಮ ನಿವಾಸದಿಂದ ಹೊರ ಹೋಗದಂತೆ ತಡೆಯಲು ಅಲ್ಲಿಗೆ ತೆರಳಿದರು. ಆದರೆ, ಅವರು ಪೊಲೀಸ್ ಅಧಿಕಾರಿಗಳ ಮೇಲೆ ಹಲ್ಲೆ ಮಾಡಿದ ದೃಶ್ಯಗಳು ವರದಿಯಾಗಿವೆ. ಈ ಸಂಬಂಧ ಅಧಿಕಾರಿಗಳಿಂದ ದೂರು ಪಡೆದ ಬಳಿಕ ಕಾನೂನುಕ್ರಮ ಕೈಗೊಳ್ಳಲಾಗುವುದು’ ಎಂದೂ ಅವರು ಹೇಳಿದ್ದಾರೆ.
#WATCH | YSRTP Chief YS Sharmila manhandles police personnel as she is being detained to prevent her from visiting SIT office over the TSPSC question paper leak case, in Hyderabad pic.twitter.com/StkI7AXkUJ
— ANI (@ANI) April 24, 2023