NDAಗೆ ಬೆಂಬಲ ನೀಡಲು ವೈಎಸ್ ಆರ್ ಕಾಂಗ್ರೆಸ್ ನಿರ್ಧಾರ

Prasthutha|

ನವದೆಹಲಿ: ಎನ್ ಡಿ ಎಯಿಂದ ಅಂತರ ಕಾಯ್ದುಕೊಂಡಿದ್ದ ವೈಎಸ್ ಆರ್ ಕಾಂಗ್ರೆಸ್ ಪಕ್ಷ ಮತ್ತೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರಕ್ಕೆ ಬೆಂಬಲ ನೀಡುವುದಾಗಿ ನಿರ್ಧರಿಸಿದೆ ಎಂದು ತಿಳಿದು ಬಂದಿದೆ.

- Advertisement -


ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ನೇತೃತ್ವದ ವೈಎಸ್ ಆರ್ ಕಾಂಗ್ರೆಸ್ ಬಿಜೆಪಿಯನ್ನು ಬೆಂಬಲಿಸಲಿದೆ. ಈ ಮೂಲಕ ಅವಿಶ್ವಾಸ ನಿರ್ಣಯದ ವಿರುದ್ಧ ಮತ ಚಲಾಯಿಸಲಿದೆ ಎಂದು ವೈಎಸ್ ಆರ್ ಕಾಂಗ್ರೆಸ್ ಉನ್ನತ ಮೂಲಗಳು ತಿಳಿಸಿವೆ ಎಂದು ವರದಿಯಾಗಿದೆ.


ಬಿಜೆಪಿ ಮಂಡಿಸುವ ಮಸೂದೆಗಳಿಗೂ ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಬೆಂಬಲ ನೀಡಲಿದೆ ಎಂದು ವೈಎಸ್ ಆರ್ ಕಾಂಗ್ರೆಸ್ ಪಕ್ಷದ ರಾಜ್ಯಸಭೆಯ ನಾಯಕ ವಿ. ವಿಜಯಸಾಯಿ ರೆಡ್ಡಿ ಹೇಳಿದ್ದಾರೆ.



Join Whatsapp