Home ರಾಜ್ಯ ಡಿಸೆಂಬರ್ ತಿಂಗಳಲ್ಲಿ ಯುವ ನಿಧಿ ಯೋಜನೆ ಪ್ರಾರಂಭ: ಕೆ.ಹೆಚ್.ಮುನಿಯಪ್ಪ

ಡಿಸೆಂಬರ್ ತಿಂಗಳಲ್ಲಿ ಯುವ ನಿಧಿ ಯೋಜನೆ ಪ್ರಾರಂಭ: ಕೆ.ಹೆಚ್.ಮುನಿಯಪ್ಪ

ದಾವಣಗೆರೆ: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 30 ರಂದು ಜಾರಿಗೊಳಿಸಲಾಗುತ್ತಿದೆ. ಈ ನಡುವೆ ಐದನೇ ಗ್ಯಾರಂಟಿ ಯೋಜನೆಯಾಗಿರುವ ಯುವ ನಿಧಿ ಯೋಜನೆಯ ಬಗ್ಗೆ ಸಚಿವ ಕೆ.ಹೆಚ್.ಮುನಿಯಪ್ಪ ಅವರು ಸುಳಿವು ನೀಡಿದ್ದು, ಡಿಸೆಂಬರ್ ತಿಂಗಳಿನಲ್ಲಿ ಜಾರಿಗೊಳಿಸಲಾಗುವುದು ಎಂದಿದ್ದಾರೆ.

ಐದನೇ ಗ್ಯಾರಂಟಿ ‘ಯುವ ನಿಧಿ’ ಯೋಜನೆಯನ್ನು ಈ ವರ್ಷದ ಡಿಸೆಂಬರ್‌ನಿಂದ ಜಾರಿಗೊಳಿಸಲಾಗುವುದು ಎಂದು ಮುನಿಯಪ್ಪ ಹೇಳಿದರು. ಕರ್ನಾಟಕ ಕಾಂಗ್ರೆಸ್ ಘೋಷಿಸಿದ ಐದು ಯೋಜನೆಗಳ ಪೈಕಿ ಮೂರು ಯೋಜನೆಗಳನ್ನು ಈಗಾಗಲೇ ಜಾರಿಗೊಳಿಸಲಾಗಿದೆ. ನಾಲ್ಕನೇ ಯೋಜನೆ ಗೃಹಲಕ್ಷ್ಮೀ ಯೋಜನೆಯನ್ನು ಆಗಸ್ಟ್ 30 ರಂದು ಜಾರಿಗೆ ತರಲಾಗುವುದು ಎಂದರು.

Join Whatsapp
Exit mobile version