ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ: ಕಾಂಗ್ರೆಸ್ ಟ್ವೀಟ್

Prasthutha|

“ನಳಿನ್, ಬೊಮ್ಮಾಯಿ ಅವರೇ ನಿಮಗೂ 200 ಯೂನಿಟ್ ವಿದ್ಯುತ್ ಫ್ರೀ, ಶೋಭಾ ಅವರೇ, ನಿಮಗೂ ಪ್ರಯಾಣ ಫ್ರೀ! ಸಿಟಿ ರವಿ ಅವರೇ, ನಿಮ್ಮ ಮನೆಯವರಿಗೂ 2000 ಫ್ರೀ”

- Advertisement -


ಬೆಂಗಳೂರು: ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಜಾರಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಬೆಳಿಗ್ಗೆಯಿಂದ ನಡೆದ ಸುದೀರ್ಘ ಸಚಿವ ಸಂಪುಟ ಸಭೆ ಬಳಿಕ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಈ ಘೋಷಣೆ ಮಾಡಿದ್ದಾರೆ.


ಇದರ ಬೆನ್ನಲ್ಲೇ ಬಿಜೆಪಿ ನಾಯಕರನ್ನು ಉಲ್ಲೇಖಿಸಿ ಟ್ವೀಟ್ ಮಾಡಿರುವ ಕಾಂಗ್ರೆಸ್, ರಾಜ್ಯ ಸರಕಾರದ ಉಚಿತ ಯೋಜನೆಗಳನ್ನು ಎಲ್ಲರಿಗೂ ತಲುಪಲಿದೆ ಎಂದು ತಿಳಿಸಿದೆ.
ಈ ಬಗ್ಗೆ ಕಾಂಗ್ರೆಸ್ ಟ್ವೀಟ್ ಮಾಡಿದ್ದು, ನಳಿನ್ ಕುಮಾರ್ ಕಟೀಲ್ ಅವರೇ, ನಿಮ್ಮ ಮನೆಗೂ 200 ಯೂನಿಟ್ ವಿದ್ಯುತ್ ಫ್ರೀ!, ಬೊಮ್ಮಾಯಿ ಅವರೇ, ನಿಮ್ಮ ಮನೆಗೂ ಫ್ರೀ!, ಶೋಭಾ ಅವರೇ, ನಿಮಗೂ ಪ್ರಯಾಣ ಫ್ರೀ! ಸಿಟಿ ರವಿ ಅವರೇ, ನಿಮ್ಮ ಮನೆಯವರಿಗೂ ₹2000 ಫ್ರೀ” ಎಂದು ಕಾಂಗ್ರೆಸ್ ಹೇಳಿದೆ.

- Advertisement -


ಬಜರಂಗದಳದ ನಿರುದ್ಯೋಗಿಗಳಿಗೂ ಯುವನಿಧಿ ಫ್ರೀ, (ಪದವಿ ಪಡೆದಿದ್ದವರಿದ್ರೆ ಮಾತ್ರ)! ಇದು ನಮ್ಮ ಗ್ಯಾರಂಟಿ. ನಾವು ನುಡಿದಂತೆ ನಡೆಯುವವರು, ನಾವು ಮಾತು ಉಳಿಸಿಕೊಳ್ಳುವವರು. ಐದೂ ಗ್ಯಾರಂಟಿಗಳನ್ನು ಜಾರಿಗೊಳಿಸಿ ಇತಿಹಾಸ ಸೃಷ್ಟಿಸಿದ್ದೇವೆ. ಇದು ನಮ್ಮ ಬದ್ಧತೆ ಎಂದು ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.