ಗುರುದಾಸ್ ಪುರದಿಂದ ಚುನಾವಣೆಗೆ ಸ್ಪರ್ಧಿಸುತ್ತಿಲ್ಲ: ಯುವರಾಜ್ ಸಿಂಗ್ ಸ್ಪಷ್ಟನೆ

Prasthutha|

ನವದೆಹಲಿ: ಲೋಕಸಭಾ ಚುನಾವಣೆಯಲ್ಲಿ ಬಾಲಿವುಡ್ ತಾರೆ ಸನ್ನಿ ಡಿಯೋಲ್ ಪ್ರತಿನಿಧಿಸುವ ಪಂಜಾಬ್ ನ ಕ್ಷೇತ್ರ ಗುರುದಾಸ್ಪುರದಿಂದ ಸ್ಪರ್ಧಿಸುವ ವಿಚಾರವನ್ನು ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರು ತಳ್ಳಿಹಾಕಿದ್ದಾರೆ.

- Advertisement -


ಈ ಸಂಬಂಧ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಸಿಂಗ್, ನಾನು ಗುರುದಾಸ್ ಪುರದಿಂದ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ನನ್ನ ಮುಖ್ಯ ಉದ್ದೇಶ ಜನರಿಗೆ ಸಹಾಯ ಮಾಡುವುದಾಗಿದೆ. ನನ್ನ ಫೌಂಡೇಶನ್ ಮೂಲಕ ನಾನು ಅದನ್ನು ಮುಂದುವರಿಸುತ್ತೇನೆ. ಹೀಗಾಗಿ ನಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ನಾವು ಒಟ್ಟಿಗೆ ಕೆಲಸ ಮುಂದುವರಿಸೋಣ ಎಂದಿದ್ದಾರೆ.



Join Whatsapp