ಬಿಜೆಪಿ-ಜೆಡಿಎಸ್ ಮೈತ್ರಿಗೆ ಬೆಂಬಲ ಸೂಚಿಸಿದ ಜಫ್ರುಲ್ಲಾ ಖಾನ್

Prasthutha|

ಬೆಂಗಳೂರು: ಬಿಜೆಪಿ-ಜೆಡಿಎಸ್ ಮೈತ್ರಿಗೆ ಜೆಡಿಎಸ್ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಜಫ್ರುಲ್ಲಾ ಖಾನ್ ಬೆಂಬಲ ಸೂಚಿಸಿದ್ದಾರೆ.

- Advertisement -


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜೆಡಿಎಸ್ ವರಿಷ್ಠ ಹೆಚ್ಡಿ ದೇವೇಗೌಡರು ತೆಗೆದುಕೊಳ್ಳುವ ಯಾವುದೇ ನಿರ್ಧಾರಕ್ಕೆ ನಾವು ಬದ್ಧ ಎಂದು ಹೇಳಿದ್ದಾರೆ.


ಬಿಜೆಪಿ-ಜೆಡಿಎಸ್ ಮೈತ್ರಿ ಬಗ್ಗೆ ಯಾವುದೇ ಅಸಮಾಧಾನ ಇಲ್ಲ. ರಾಜಕಾರಣ ನಿಂತ ನೀರಲ್ಲ, ಹೀಗಾಗಿ ವರಿಷ್ಠರು ಈ ನಿರ್ಧಾರ ಕೈಗೊಂಡಿದ್ದಾರೆ. ಜಾತ್ಯತೀತ ತತ್ವದ ಜೊತೆಗೆ ರಾಜ್ಯದ ಹಿತದೃಷ್ಟಿಯಿಂದ ಮೈತ್ರಿ ಮಾಡಿಕೊಳ್ಳಲಾಗಿದೆ. ಕೆಲ ಮುಸ್ಲಿಂ ನಾಯಕರಿಗೆ ಅಸಮಾಧಾನ ಆಗಿರಬಹುದು, ಅದನ್ನ ಸರಿಪಡಿಸುತ್ತೇವೆ. ಆದರೆ ಮುಸ್ಲಿಂ ನಾಯಕರು ಜೆಡಿಎಸ್ ನಿಂದ ದೂರ ಹೋಗುವುದಿಲ್ಲ ಎಂದರು.