ಹಿಜಾಬ್ ಕುರಿತ ಹೇಳಿಕೆಗೆ ಟ್ವಿಟರ್’ನಲ್ಲಿ ‘ವಿಷಾದ’ ವ್ಯಕ್ತಪಡಿಸಿದ ಝಮೀರ್ ಅಹ್ಮದ್ ಖಾನ್ !

Prasthutha|

ಬೆಂಗಳೂರು: ಹಿಜಾಬ್ ಕುರಿತು ನಾನು ಮಾತನಾಡುತ್ತೇನೆ. ನನ್ನ ಹೇಳಿಕೆಗೆ ಕ್ಷಮೆ ಯಾಚಿಸುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದ ಕಾಂಗ್ರೆಸ್ ಶಾಸಕ ಝಮೀರ್ ಅಹ್ಮದ್ ಖಾನ್, ಕೆಪಿಸಿಸಿ ಶಿಸ್ತು ಪಾಲನಾ ಸಮಿತಿಯು ನೋಟೀಸ್ ಜಾರಿಗೊಳಿಸಿದ ಬಳಿಕ, ಇದೀಗ ತನ್ನ ಹೇಳಿಕೆಗೆ ಟ್ವಿಟರ್’ನಲ್ಲಿ ‘ವಿಷಾದ’ ವ್ಯಕ್ತಪಡಿಸಿದ್ದಾರೆ.
#HIJABISOURPROUD ಹ್ಯಾಷ್ ಟ್ಯಾಗ್’ನೊಂದಿಗೆ ಸರಣಿ ಟ್ವೀಟ್ ಮಾಡಿರುವ ಝಮೀರ್ ಅಹ್ಮದ್ ಖಾನ್, “ಯಾರ ಮನಸ್ಸನ್ನಾದರೂ ನೋಯಿಸುವ ಇಲ್ಲವೇ ಅಗೌರವ ತೋರಿಸುವ ದುರುದ್ದೇಶ ನನಗಿಲ್ಲ. ಹೆಣ್ಣು ಮಕ್ಕಳ ಮೇಲಿನ ಕಾಳಜಿಯ ಸದುದ್ದೇಶದಿಂದ ಹೇಳಿರುವುದು. ನನ್ನ ಹೇಳಿಕೆಯನ್ನು ತಿರುಚಲಾಗಿದ್ದು, ಆ ಬಗ್ಗೆ ವಿಷಾಧವಿದೆ ಎಂದಿದ್ದಾರೆ.

- Advertisement -

ಹಿಜಾಬ್ – ಬುರ್ಖಾ ಧರಿಸುವುದನ್ನು ಧಾರ್ಮಿಕ ಕಟ್ಟಳೆಯನ್ನಾಗಿ ಮಾಡಿದ ನಮ್ಮ ಹಿರಿಯರ ಉದ್ದೇಶವೂ ಹೆಣ್ಣುಮಕ್ಕಳಿಗೆ ರಕ್ಷಣೆ ಕೊಡುವುದೇ ಆಗಿದೆ. ಈ ಹಿನ್ನೆಲೆಯಲ್ಲಿ ನನ್ನಿಂದ ಆ ಮಾತುಗಳು ಬಂತು. ಇದರ ಹೊರತಾಗಿ ಬೇರೆ ಯಾವ ದುರುದ್ದೇಶವೂ ನನಗಿರಲಿಲ್ಲ. 3/7

ಇತ್ತೀಚೆಗೆ ಅರ್ಧ ಹೆಲ್ಮೆಟ್ ಬದಲು ಫುಲ್ ಹೆಲ್ಮೆಟ್ ಅನ್ನು ಕಡ್ಡಾಯಗೊಳಿಸಲಾಗಿದೆ. ಸರ್ಕಾರದ ಈ ನಿಲುವಿನ ಹಿಂದೆ ಜನರ ಜೀವ ರಕ್ಷಣೆಯ ಉದ್ದೇಶ ಹೇಗಿದೆಯೋ ಹಾಗೆಯೇ ನನ್ನ ಹೇಳಿಕೆ ಹಿಂದೆ ಹೆಣ್ಣು ಮಕ್ಕಳ ಬಗೆಗಿನ ಕಾಳಜಿ ಇದೆ. 4/7

- Advertisement -

ಹೌದು, ಹೆಣ್ಣು ಮಕ್ಕಳ ಅತ್ಯಾಚಾರಕ್ಕೆ ಅವರ ಮೈಮೇಲಿನ ಬಟ್ಟೆ ಖಂಡಿತ ಕಾರಣ ಅಲ್ಲ, ಮೈ ತುಂಬಾ ಬಟ್ಟೆ ಹಾಕಿದರೂ, ಹಾಕದೆ ಇದ್ದರೂ ಅತ್ಯಾಚಾರ ನಡೆಯುತ್ತಲೇ ಇರುತ್ತದೆ. ಇದಕ್ಕೆ ಮುಖ್ಯ ಕಾರಣ ಕೆಲವು ಪುರುಷರಲ್ಲಿರುವ ರೇಪಿಸ್ಟ್ ಮನಸ್ಥಿತಿ.
ಹೆಣ್ಣುಮಕ್ಕಳ ಅತ್ಯಾಚಾರ ಕಡಿಮೆಯಾಗಬೇಕಾದರೆ ಮೊದಲು ಪುರುಷರು ಬದಲಾಗಬೇಕು. 5/7

ಹೆಣ್ಣುಮಕ್ಕಳಿಗೆ ನಿಜವಾದ ರಕ್ಷಣೆ ನೀಡುವುದು ಶಿಕ್ಷಣ ಮಾತ್ರ ಎಂದು ನನ್ನ ಅಭಿಪ್ರಾಯ. ಹಿಜಾಬ್ – ಬುರ್ಖಾ ಧರಿಸಿಯಾದರೂ ಒಮ್ಮೆ ಅವರು ಶಿಕ್ಷಣ ಪಡೆಯಲಿ. ಆ ಶಿಕ್ಷಣದ ಬಲದಿಂದ ಅವರು ತಮ್ಮನ್ನು ತಾವು ರಕ್ಷಿಸಿಕೊಳ್ಳುತ್ತಾರೆ ಎಂಬ ನಂಬಿಕೆ ನನ್ನದು. 6/7

ಶಿಕ್ಷಣಕ್ಕಿಂತ ಶಕ್ತಿಯುತವಾದ ಅಸ್ತ್ರ ಬೇರೆ ಇಲ್ಲ. ಆದ್ದರಿಂದ ಹಿಜಾಬ್ -ಬುರ್ಖಾದ ಕಾರಣ ನೀಡಿ ದಯವಿಟ್ಟು ಮುಸ್ಲಿಂ ಹೆಣ್ಣು ಮಕ್ಕಳಿಗೆ ಶಿಕ್ಷಣವನ್ನು ನಿರಾಕರಿಸಬೇಡಿ ಎಂದು ನಾನು ಸರ್ಕಾರವನ್ನು ಮತ್ತು ಸಮಾಜವನ್ನು ಕೈಮುಗಿದು ಬೇಡಿಕೊಳ್ಳುತ್ತೇನೆ. 7/7

Join Whatsapp