ಝಮೀರ್ ಅಹಮ್ಮದ್ ಖಾನ್ ಗೆ ಎದೆ ನೋವು, ಆಸ್ಪತ್ರೆಗೆ ದಾಖಲು

Prasthutha|

ಚಿತ್ರದುರ್ಗ: ಚುನಾವಣಾ ಪ್ರಚಾರಕ್ಕೆ ಆಗಮಿಸಿದ್ದ ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಜಮೀರ್ ಅಹಮದ್ ಖಾನ್ ಅವರಿಗೆ ಎದೆ ನೋವು ಕಾಣಿಸಿಕೊಂಡಿದ್ದರಿಂದ ಇಲ್ಲಿನ ಬಸವೇಶ್ವರ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಸೋಮವಾರ ಚಿಕಿತ್ಸೆ ಪಡೆದರು.

- Advertisement -


ಆಸ್ಪತ್ರೆಯ ತುರ್ತು ನಿಗಾ ಘಟಕದಲ್ಲಿ ಜಮೀರ್ ಆರೋಗ್ಯ ಪರೀಕ್ಷಿಸಲಾಗಿದ್ದು, ಇಕೊ, ಇಸಿಜಿ, ರಕ್ತ ಪರೀಕ್ಷೆ ನಡೆಸಲಾಗಿದೆ. ಆರೋಗ್ಯ ಸ್ಥಿರವಾಗಿರುವುದನ್ನು ಖಚಿತಪಡಿಸಿದ ವೈದ್ಯರು, ವಿಶ್ರಾಂತಿಗೆ ಸಲಹೆ ನೀಡಿ ಆಸ್ಪತ್ರೆಯಿಂದ ಬಿಡುಗಡೆಗೊಳಿಸಿದರು. ‘ವಡೆ ಚೆನ್ನಾಗಿದೆ ಎಂದು ಬೆಳಿಗ್ಗೆ ಕೊಂಚ ಹೆಚ್ಚಾಗಿ ತಿಂಡಿ ತಿಂದಿದ್ದೆ. ಗ್ಯಾಸ್ಟ್ರಿಕ್ ಸಮಸ್ಯೆಯಿಂದ ಎದೆನೋವು ಕಾಣಿಸಿಕೊಂಡಿತು.

ಮುನ್ನೆಚ್ಚರಿಕೆಯ ಕ್ರಮವಾಗಿ ಆಸ್ಪತ್ರೆಗೆ ಧಾವಿಸಿ ಆರೋಗ್ಯ ಪರೀಕ್ಷಿಸಿದೆ. ವೈದ್ಯರ ಸಲಹೆ ಪಡೆದಿದ್ದು, ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳುವೆ’ ಎಂದು ಸಚಿವ ಜಮೀರ್ ಅವರು ಸುದ್ದಿಗಾರರಿಗೆ ತಿಳಿಸಿದರು.



Join Whatsapp