ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರಾಗಿ ಜಮೀರ್ ಅಹ್ಮದ್ ಖಾನ್ ನೇಮಕ

Prasthutha|

ಬಳ್ಳಾರಿ: ಬಳ್ಳಾರಿ ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ಜಮೀರ್ ಅಹ್ಮದ್ ಖಾನ್ ಅವರನ್ನು ಸರ್ಕಾರ ಶುಕ್ರವಾರ ನೇಮಕ ಮಾಡಿದೆ.

- Advertisement -


ವಾಲ್ಮೀಕಿ ನಿಗಮದಲ್ಲಿನ ಹಗರಣ ಬಯಲಾದ ಹಿನ್ನೆಲೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಬಿ. ನಾಗೇಂದ್ರ ಅವರು ಜೂನ್ 6 ರಂದು ಸಚಿವ ಸ್ಥಾನ ತೊರೆದಿದ್ದರು. ಅದರೊಂದಿಗೆ ಬಳ್ಳಾರಿ ಉಸ್ತುವಾರಿ ಸಚಿವ ಸ್ಥಾನವೂ ತೆರವಾಗಿತ್ತು.


ಬಳ್ಳಾರಿ ಜಿಲ್ಲಾ ಉಸ್ತುವಾರಿಯನ್ನು ಸಚಿವ ಜಮೀರ್ ಗೆ ವಹಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಇತ್ತೀಚೆಗೆ ಹೊಸಪೇಟೆಯಲ್ಲಿ ತಿಳಿಸಿದ್ದರು. ಅದರಂತೆ, ಜಮೀರ್ ಅವರನ್ನು ಜಿಲ್ಲಾ ಉಸ್ತುವಾರಿ ಸಚಿವರನ್ನಾಗಿ ನೇಮಿಸಿ ಸರ್ಕಾರ ಶುಕ್ರವಾರ ಅಧಿಕೃತ ಆದೇಶ ಹೊರಡಿಸಿದೆ.

Join Whatsapp