Home ಟಾಪ್ ಸುದ್ದಿಗಳು ಝಮೀರ್ ಅಹ್ಮದ್ ಹೇಳಿಕೆ: ವಿಧಾನಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ

ಝಮೀರ್ ಅಹ್ಮದ್ ಹೇಳಿಕೆ: ವಿಧಾನಸಭೆಯಲ್ಲಿ ಬಿಜೆಪಿ- ಕಾಂಗ್ರೆಸ್ ಸದಸ್ಯರ ನಡುವೆ ಗದ್ದಲ

ಬೆಳಗಾವಿ: ಸಚಿವ ಝಮೀರ್ ಅಹ್ಮದ್ ಹೇಳಿಕೆ ವಿಚಾರವಾಗಿ ಆಡಳಿತ ಪಕ್ಷದ ಸದಸ್ಯರು ಹಾಗೂ ವಿಪಕ್ಷ ನಾಯಕರ ನಡುವೆ ವಾಗ್ವಾದ ನಡೆದಿದ್ದು, ಸ್ಪೀಕರ್ ಯುಟಿ ಖಾದರ್ ಅವರು ಅಧಿವೇಶನವನ್ನು ಮುಂದೂಡಿ ಸಂಧಾನ ಸಭೆ ನಡೆಸಿದರು.

ವಿಧಾನಸಭೆಯಲ್ಲಿ ಗದ್ದಲ ಉಂಟಾದ ಹಿನ್ನೆಲೆ ಸ್ಪೀಕರ್ ಕಚೇರಿಯಲ್ಲಿ ಯುಟಿ ಖಾದರ್ ಅವರು ಸಂಧಾನ ಸಭೆ ನಡೆಸಿದರು. ಸಿಎಂ ಸಿದ್ದರಾಮಯ್ಯ, ವಿಪಕ್ಷ ನಾಯಕ ಅಶೋಕ್, ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ್, ಸಚಿವ ಜಮೀರ್ ಅಹಮದ್ ಖಾನ್, ಶಾಸಕ ಅರಗ ಜ್ಞಾನೇಂದ್ರ ಮತ್ತಿತರರು ಭಾಗಿಯಾದರು. ಸ್ಪೀಕರ್ ಸಂಧಾನ ಸಭೆಯಲ್ಲೂ ಬಿಜೆಪಿ ಹಾಗೂ ಕಾಂಗ್ರೆಸ್ ನಾಯಕರ ನಡುವೆ ಮಾತಿನ ಚಕಮಕಿ ನಡೆಯಿತು.

Join Whatsapp
Exit mobile version