Home ಟಾಪ್ ಸುದ್ದಿಗಳು ಕುಮಾರಸ್ವಾಮಿಗೆ ಕರಿಯ ಎಂದಿದ್ದಕ್ಕೆ ಕ್ಷಮೆಯಾಚಿಸಿದ ಝಮೀರ್

ಕುಮಾರಸ್ವಾಮಿಗೆ ಕರಿಯ ಎಂದಿದ್ದಕ್ಕೆ ಕ್ಷಮೆಯಾಚಿಸಿದ ಝಮೀರ್

ಮೈಸೂರು: ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಹೇಳಿಕೆಗೆ ನೀಡಿದ್ದ ಸಚಿವ ಝಮೀರ್ ಅಹ್ಮದ್ ಸಾರ್ವಜನಿಕವಾಗಿ ಕ್ಷಮೆಯಾಚಿಸಿದರು.


ಮೈಸೂರಿನಲ್ಲಿ ಮಾತನಾಡಿದ ಅವರು, ಜೆಡಿಎಸ್ ಕಾರ್ಯಕರ್ತರಿಗೆ ನೋವಾಗಿದ್ದರೆ ಕ್ಷಮೆ ಕೋರುತ್ತೇನೆ ಎಂದು ಹೇಳಿದ್ದಾರೆ.


ನಾನು ಮತ್ತು ಕುಮಾರಸ್ವಾಮಿ ಅವರು ಆತ್ಮೀಯರಾಗಿದ್ದವರು. 24 ಗಂಟೆಯಲ್ಲಿ 14 ಗಂಟೆ ಜೊತೆಯಲ್ಲಿ ಇದ್ದವರು. ಅವರು ನನ್ನ ಕುಳ್ಳ ಅಂತಾ ಇದ್ರು, ನಾನು ಕರಿಯಣ್ಣ ಅಂತಿದ್ದೆ. ಈಗ ಚುನಾವಣೆ ಹಿನ್ನೆಲೆ ಅದನ್ನು ದೊಡ್ಡ ವಿಚಾರ ಮಾಡ್ತಾ ಇದ್ದಾರೆ. ನಾನು ಮೊದಲ ಬಾರಿಗೆ ಕರಿಯಣ್ಣ ಅಂತಿಲ್ಲ. ನಾನು ಅಂತಹದ್ದು ಏನು ಹೇಳಿಲ್ಲ. ಪ್ರೀತಿಯಿಂದ ಅವರು ಕುಳ್ಳ ಅಂತಾ ಇದ್ರು, ನಾನು ಕರಿಯಣ್ಣ ಅಂತಾ ಇದ್ದೆ. ನನ್ನ ಮಾತಿಂದ ಯಾರಿಗಾದ್ರು ನಾವಾಗಿದ್ರೆ ನಾನು ಕ್ಷಮೆ ಕೇಳ್ತೀನಿ. ನನ್ನ ಹೇಳಿಕೆಯಿಂದ ಉಪಚುನಾವಣೆ ಮೇಲೆ ಪರಿಮಾಣ ಬೀರಲ್ಲ ಎಂದು ತಿಳಿಸಿದರು.

Join Whatsapp
Exit mobile version