ಜೆಡಿಎಸ್ ಸೆಕ್ಯೂಲರ್ ಪದ ತೆಗೆಯುವುದು ಸೂಕ್ತ: ಸಚಿವ ಝಮೀರ್ ಅಹಮದ್

Prasthutha|


ಬೆಂಗಳೂರು: ಬಿಜೆಪಿ -ಜೆಡಿಎಸ್ ಮೈತ್ರಿಯಿಂದ ಕಾಂಗ್ರೆಸ್ ಪಕ್ಷ ಕ್ಕೆ ಅನುಕೂಲ ಆಗಲಿದ್ದು, ಇದೀಗ ಜೆಡಿಎಸ್ ಬಿಜೆಪಿ ಬಿ ಟೀಮ್ ಎಂಬುದು ಸಾಬೀತಾಗಿದ್ದು, ಜೆಡಿಎಸ್ ಇನ್ಮುಂದೆ ಜಾತ್ಯತೀತ ಪದ ತೆಗೆಯುವುದು ಸೂಕ್ತ ಎಂದು ವಸತಿ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ ಝಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.

- Advertisement -

ಈ ಕುರಿತು ಮಾಧ್ಯಮಗಳ ಜೊತೆಗೆ ಮಾತನಾಡಿದ ಜಮೀರ್‌ ಅಹಮದ್‌ ಖಾನ್‌ ಅವರು, ಜೆಡಿಎಸ್‌ ವಿರುದ್ದ ವಾಗ್ದಾಳಿ ನಡೆಸಿದ್ದು, ಜೆಡಿಎಸ್ ಇನ್ಮುಂದೆ ಜಾತ್ಯತೀತ ಪದ ತೆಗೆಯುವುದು ಸೂಕ್ತ ಎಂದು ಹೇಳಿದ್ದಾರೆ. ಅಲ್ಲದೇ 2019 ರಲ್ಲಿ ಜೆಡಿಎಸ್ ಜತೆ ಕಾಂಗ್ರೆಸ್ ಮೈತ್ರಿ ಮಾಡಿಕೊಂಡಿತ್ತು. ನಾವು ಪ್ರತ್ಯೇಕ ವಾಗಿ ಹೋಗಿದ್ದರೆ ಕನಿಷ್ಠ ಹತ್ತು ಸ್ಥಾನ ಗೆಲ್ಲುತ್ತಿದ್ದೆವು. ಜೆಡಿಎಸ್ ಜತೆ ಹೋಗಿದ್ದಕ್ಕೆ ಒನ್ ಡಿಜಿಟ್ ಗೆ ಇಳಿದೆವು. 2024 ರ ಲೋಕಸಭೆ ಚುನಾವಣೆ ಯಲ್ಲಿ ಬಿಜೆಪಿ ಸ್ಥಿತಿ ಯೂ ಇದೇ ಆಗಲಿದೆ ಎಂದು ವ್ಯಂಗ್ಯವಾಡಿದರು.

Join Whatsapp