ಝೀ ನ್ಯೂಸ್ ನಿರೂಪಕ ರೋಹಿತ್ ರಂಜನ್ ಪ್ರಕರಣ: ಬಲವಂತದ ಕ್ರಮಕೈಗೊಳ್ಳದಂತೆ ಸುಪ್ರೀಂಕೋರ್ಟ್ ಸೂಚನೆ

Prasthutha|

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರ ವೀಡಿಯೋವನ್ನು ತಿರುಚಿ ಪ್ರಸಾರ ಮಾಡಿದ ಆರೋಪ ಎದುರಿಸುತ್ತಿರುವ ಝೀ ನ್ಯೂಸ್ ನಿರೂಪಕ ರೋಹಿತ್ ರಂಜನ್ ವಿರುದ್ಧ ಬಲವಂತದ ಕ್ರಮಕೈಗೊಳ್ಳದಂತೆ ಸುಪ್ರೀಂಕೋರ್ಟ್ ಸೂಚಿಸಿದ್ದು, ನಿರೂಪಕನಿಗೆ ತಾತ್ಕಾಲಿಕ ರಿಲೀಫ್ ದೊರೆತಿದೆ.

- Advertisement -

ರಾಹುಲ್ ಗಾಂಧಿ ಅವರ ಹೇಳಿಕೆಯನ್ನು ತಿರುಚಿ ಉದ್ದೇಶಪೂರ್ವಕವಾಗಿ ಸುಳ್ಳು ಸುದ್ದಿ ಹಬ್ಬಿಸಿದ ಆರೋಪದ ಮೇಲೆ ಝೀ ಟಿವಿಯ ನಿರೂಪಕ ರಂಜನ್ ಮತ್ತು ಬಿಜೆಪಿಯ ಇತರ ನಾಯಕರ ವಿರುದ್ಧ ನೋಯ್ಡಾ ಸೆಕ್ಟರ್-20 ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಜುಲೈ 4 ರಂದು ರಂಜನ್ ರನ್ನು ಗಾಜಿಯಾಬಾದ್ ನಲ್ಲಿ ಬಂಧಿಸಿದ್ದರು.

Join Whatsapp