ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಎರಡು ವಾರಗಳಲ್ಲಿ ಐವರಲ್ಲಿ ಝೀಕಾ ಸೋಂಕು ಪತ್ತೆಯಾಗಿದೆ. ಡೆಂಗ್ಯೂ ಬೆನ್ನಲ್ಲೇ ಝೀಕಾ ವೈರಸ್ ಅಬ್ಬರ ಆತಂಕ ಸೃಷ್ಟಿಸಿದೆ.
ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ಐವರಲ್ಲಿ ಝೀಕಾ ವೈರಸ್ ದೃಢ ಪಟ್ಟಿದ್ದು, ಸೋಂಕಿತರ ಮೇಲೆ ಆರೋಗ್ಯ ಇಲಾಖೆ ನಿಗಾ ವಹಿಸಿದೆ.ಸೋಂಕಿತರ ಕುಟುಂಬದವರ ರಕ್ತದ ಮಾದರಿಯನ್ನು ಸಂಗ್ರಹಿಸಿ ತಪಾಸಣೆಗೆ ಕಳುಹಿಸಲಾಗಿದೆ.
ಜಿಗಣಿಯಲ್ಲಿ ಅವರಿಗೆ ಝೀಕಾ ಸೋಂಕು ಪತ್ತೆಯಾಗಿದೆ. ಆತಂಕ ಪಡುವ ಅಗತ್ಯವಿಲ್ಲ. ಗರ್ಭಿಣಿಯರು ಹೆಚ್ಚು ಎಚ್ಚರಿಕೆಯಿಂದ ಇರಬೇಕು. ಆರೋಗ್ಯ ಇಲಾಖೆ ಸೋಂಕಿತರ ಮೇಲೆ ನಿಗಾವಹಿಸಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ನೀಡಿದ್ದಾರೆ.