Home ರಾಷ್ಟ್ರೀಯ Zomato ಪ್ರತಿ ಆರ್ಡರ್ ಗೆ ₹10 ಶುಲ್ಕ ಹೆಚ್ಚಳ!

Zomato ಪ್ರತಿ ಆರ್ಡರ್ ಗೆ ₹10 ಶುಲ್ಕ ಹೆಚ್ಚಳ!

ನವದೆಹಲಿ: ಆನ್ ಲೈನ್ ನಲ್ಲಿ ಆಹಾರ ಪದಾರ್ಥ ಪೂರೈಸುವ ಜೊಮಾಟೊ ಕಂಪನಿಯು ತನ್ನ ಪ್ರತಿ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು (ಪ್ಲಾಟ್ ಫಾರ್ಮ್ ಫೀ) ₹10 ಹೆಚ್ಚಳ ಮಾಡಿದೆ.


ಹಬ್ಬಗಳ ಸಂದರ್ಭದಲ್ಲಿ ಆರ್ಡರ್ ಗಳ ಸಂಖ್ಯೆ ಹೆಚ್ಚಿರುವುದರಿಂದ ಶುಲ್ಕವನ್ನು ಏರಿಕೆ ಮಾಡಲಾಗಿದ್ದು, ಸದ್ಯ ದೆಹಲಿಯಲ್ಲಿ ₹10 ಹೆಚ್ಚು ಮಾಡಲಾಗಿದೆ ಎಂದು ಕಂಪನಿ ತಿಳಿಸಿದೆ.


ಬೇರೆ ಬೇರೆ ನಗರದಲ್ಲಿ ಶುಲ್ಕದ ದರ ಬದಲಾಗಲಿದೆ ಎಂದಿರುವ ಕಂಪನಿ ಯಾವ ನಗರದಲ್ಲಿ ಎಷ್ಟು ಶುಲ್ಕ ಇರಲಿದೆ ಎನ್ನುವ ಬಗ್ಗೆ ಮಾಹಿತಿ ನೀಡಿಲ್ಲ.


ಕಳೆದ ಏಪ್ರಿಲ್ ತಿಂಗಳಿನಲ್ಲಿಯೂ ಜೊಮಾಟೊ ಆರ್ಡರ್ ಮೇಲೆ ವಿಧಿಸುವ ಶುಲ್ಕವನ್ನು ₹4 ಏರಿಕೆ ಮಾಡಿತ್ತು. ಈಗ ಮತ್ತೆ ದರ ಏರಿಸಿ ಪ್ರಕಟಣೆ ಹೊರಡಿಸಿದೆ.

Join Whatsapp
Exit mobile version