ಜುಬೈರ್ ಬಂಧನ : ದೆಹಲಿ ಪೊಲೀಸರ ನಿಲುವನ್ನು ಪ್ರಶ್ನಿಸಿದ ಹೈಕೋರ್ಟ್

Prasthutha|

ನವದೆಹಲಿ: 2018ರಲ್ಲಿ ಮಾಡಿದ್ದ ಟ್ವೀಟ್‌ ಪ್ರಕರಣದಲ್ಲಿ ತನ್ನನ್ನು ಬಂಧಿಸಿರುವ ದೆಹಲಿ ಪೊಲೀಸರ ಕಾನೂನು ಬದ್ಧತೆಯನ್ನು ‘ಆಲ್ಟ್ ನ್ಯೂಸ್ ಫ್ಯಾಕ್ಟ್ ಚೆಕ್‌’ನ ಸಹ ಸಂಸ್ಥಾಪಕ ಮೊಹಮ್ಮದ್ ಜುಬೈರ್ ಪ್ರಶ್ನಿಸಿ, ದೆಹಲಿ ಹೈಕೋರ್ಟ್ ಗೆ ಮನವಿ ಸಲ್ಲಿಸಿದ್ದರು. ಈ ಮನವಿಗೆ ಹೈಕೋರ್ಟ್ ಸ್ಪಂದಿಸಿದ್ದು, ದೆಹಲಿ ಪೊಲೀಸರ ನಿಲುವನ್ನು ವ್ಯಕ್ತಪಡಿಸುವಂತೆ ಹೇಳಿದೆ.

- Advertisement -

ಜುಬೈರ್‌ ಅವರನ್ನು ನಾಲ್ಕು ದಿನಗಳ ಕಾಲ ಪೊಲೀಸ್ ಕಸ್ಟಡಿಗೆ ನೀಡಿದ ವಿಚಾರಣಾ ನ್ಯಾಯಾಲಯದ ಜೂನ್ 28ರ ಆದೇಶದ ಕಾನೂನುಬದ್ಧತೆಯನ್ನು ಪ್ರಶ್ನಿಸಿರುವ ಮನವಿಗೆ ಪ್ರತಿಕ್ರಿಯೆ ಸಲ್ಲಿಸಲು ತನಿಖಾ ಸಂಸ್ಥೆಗೆ ಎರಡು ವಾರಗಳ ಕಾಲಾವಕಾಶ ನೀಡಿದ್ದು, ನ್ಯಾಯಮೂರ್ತಿ ಸಂಜೀವ್ ನರೂಲ ಅವರು ಈ ಸಂಬಂಧ ದೆಹಲಿ ಪೊಲೀಸರಿಗೆ ನೋಟಿಸ್ ಜಾರಿ ಮಾಡಿದ್ದಾರೆ.

ಪ್ರಕರಣದ ಮುಂದಿನ ವಿಚಾರಣೆಯನ್ನು ಜುಲೈ 27ಕ್ಕೆ ಮುಂದೂಡಲಾಗಿದೆ.

Join Whatsapp